ಏ.17 ರಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಇಲ್ಲಿನ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಕ್ಷಿತ್ ಶಿವರಾಂ ಏ.17 ರಂದು ಬೆಳಿಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಮನೆಗ ತೆರಳಿ ಅಲ್ಲಿಂದ ಬೆಳ್ತಂಗಡಿ ಮಿನಿ ವಿಧಾನ ಸೌಧದ ವರೆಗೆ ಅಭಿಮಾನಿಗಳೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.