ಮೈಸೂರು: ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರು ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರು ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್ನಲ್ಲಿ ತಂಗಲಿದ್ದಾರೆ ಎನ್ನಲಾಗಿದೆ.
ಮೈಸೂರು ಭಾಗದ ಯಾತ್ರೆ ಮುಗಿಸಿ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಅಕ್ಟೋಬರ್ 6 ರಂದು ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸುವ ಮೊದಲು ತಾಯಿ-ಮಗ ಇಬ್ಬರೂ ಕೊಡಗಿನಲ್ಲಿ ಎರಡು ದಿನಗಳನ್ನು ಕಳೆಯಲಿದ್ದಾರೆ ಎಂದು ವರದಿಯಾಗಿದೆ.