udupixpress
Home Trending ಕಾಂಗ್ರೆಸ್ ನೀಚ ರಾಜಕಾರಣ ಮಾಡುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್

ಕಾಂಗ್ರೆಸ್ ನೀಚ ರಾಜಕಾರಣ ಮಾಡುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್

ಕಲಬುರಗಿ: ಕಾಂಗ್ರೆಸ್ ಬೆಂಕಿ ಹಚ್ಚುವುದರಲ್ಲಿ ನಿಸ್ಸೀಮರು, ತನ್ನ ನೀಚ ರಾಜಕಾರಣವನ್ನು ಮುಂದುವರಿಸುತ್ತಿದೆ. ಅಧಿಕಾರ ಇಲ್ಲದ ರಾಜ್ಯಗಳಲ್ಲಿ ಬೆಂಕಿಹಚ್ಚಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್ ಆರೋಪಿಸಿದರು.

ಕಲಬುರಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ-ಡಿಕೆಶಿ ನಡುವಿನ ಗೊಂದಲದಿಂದಲೇ ಕೆ ಜಿ ಹಳ್ಳಿ , ಡಿ ಜೆ ಹಳ್ಳಿ ಗಲಭೆ ನಡೆದಿದೆ. ಅವರಿಗೆ ರಾಷ್ಟೀಯ ಅಧ್ಯಕ್ಷರನ್ನು ನೇಮಕ ಮಾಡಲು ಆಗುತ್ತಿಲ್ಲಾ. ವಿನಾಕಾರಣ ಗೊಂದಲ ಸೃಷ್ಟಿಸಿ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಟಿಪ್ಪು ಬಗ್ಗೆ ವಿಧಾನ ಪರಿಷತ್ ಸದಸ್ಯ ಎಚ್​ ವಿಶ್ವನಾಥ್ ನೀಡಿರುವ ಹೇಳಿಕೆ ವೈಯಕ್ತಿಕ. ಬಿಜೆಪಿ ಟಿಪ್ಪು ವಿರುದ್ಧ ಹೋರಾಡುತ್ತಾ ಬಂದಿದೆ. ಟಿಪ್ಪುವಿನ ವಿಚಾರದಲ್ಲಿ ಬಿಜೆಪಿಗೆ ಸ್ಪಷ್ಟ ನಿಲುವಿದೆ. ಅದಕ್ಕೆ ಮುಂದೆಯೂ ಬದ್ಧವಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.