ಬೆಂಗಳೂರು: ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ದಿನೇಶ್ ಗುಂಡೂರಾವ್, ಡಿಕೆಶಿ ಮೊದಲಾದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ನಡೆದ ಸಭೆ ನಡೆದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ನ ಎಲ್ಲಾ ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ.
ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಪಕ್ಷದ 22 ಸಚಿವರು ಹಾಗೂ ಜೆಡಿಎಸ್ ಪಕ್ಷದ 9 ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಮೂಲಕ ದೋಸ್ತಿಗಳು ಸರ್ಕಾರ ಉಳಿಸಿಕೊಳ್ಳಲು ಕೊನೆಯ ಅಸ್ತ್ರ ಪ್ರಯೋಗಿಸಲಾಗಿದೆ. ಸಿಎಂ ಕುಮಾರಸ್ವಾಮಿ ಕೈಗೆ ಸಚಿವರು ರಾಜೀನಾಮೆ ಪತ್ರ ನೀಡಲಿದ್ದು, ಬಳಿಕ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.
ರಾಜೀನಾಮೆಗೆ ಹಿಂದೇಟು:
ಈ ಮದ್ಯೆ ಕೆಲ ಸಚಿವರು ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದಾರೆನ್ನಲಾಗಿದೆ. ‘ನಾವು ಇತ್ತೀಚೆಗಷ್ಟೇ ಮಂತ್ರಿಯಾದವರು, ನಾವ್ಯಾಕೆ ರಾಜೀನಾಮೆ ನೀಡಬೇಕು’ ಎಂದು ಪ್ರಶ್ನಿಸಿದ್ದಾರೆ. ಆದರೆ ಹಿರಿಯ ನಾಯಕರು ಸಚಿವರ ಮನವೊಲಿಸುವ ಯತ್ನ ಮುಂದುವರೆಸಿದ್ದಾರೆ. ಹೀಗಾಗಿ ರಾಜ್ಯರಾಜಕಾರಣದಲ್ಲಿ ನಾನ ಕೋಲಹಲ ಸೃಷ್ಟಿಯಾಗಿದೆ.