ಬೆಳಗಾವಿ, ಮಸ್ಕಿಯಲ್ಲಿ ಕಾಂಗ್ರೆಸ್ ಮುನ್ನಡೆ; ಬಸವಕಲ್ಯಾಣದಲ್ಲಿ ಬಿಜೆಪಿ ಮುನ್ನಡೆ

ಉಡುಪಿ: ರಾಜ್ಯದ ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 7299 ಮತಗಳನ್ನು ಪಡೆದುಕೊಂಡಿದ್ದು, 1751 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 5548 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಏಳನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 25,432 ಮತಗಳನ್ನು ಗಳಿಸಿದರೆ, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 22,780 ಮತಗಳನ್ನು ಪಡೆದಿದ್ದಾರೆ. ಸತೀಶ್ ಜಾರಕಿಹೊಳಿ 2652 ಮತಗಳ ಅಂತರ ಮುನ್ನಡೆ ಸಾಧಿಸಿದ್ದಾರೆ.

ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣ್ 1562 ಮತಗಳನ್ನು ಗಳಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ 3736 ಮತಗಳನ್ನು ಪಡೆದಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಸೈಯದ್ 254 ಮತಗಳನ್ನು ಪಡೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ 2174 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.