ಉಡುಪಿ: ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರದಂದು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ನಂತರ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಹಮ್ಮಿಕೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಉಡುಪಿ ಸಿಟಿ ಬಸ್ ಸ್ಟಾಂಡ್ ನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಬೃಹತ್ ಪಾದಯಾತ್ರೆಯಲ್ಲಿ ಭಾಗಿಯಾದರು.

ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮಲ್ಪೆ ಬಂದರಿನಲ್ಲಿ 75 ಮೀನುಗಾರರು ಕಾಲುಜಾರಿ ಸಾವನ್ನಪ್ಪಿದ್ದಾರೆ. ಬಿಜೆಪಿಗರು ಈ ಕುರಿತು ತಲೆಕೆಡಿಸಿಕೊಂಡಿಲ್ಲ. ಮೀನುಗಾರರಿಗಾಗಿ ಆಂಬುಲೆನ್ಸ್ ನೀಡಿದವರು ಡಿ.ಕೆ ಶಿವಕುಮಾರ್. ಬಿಜೆಪಿಯ ಬೆಲೆ ಏರಿಕೆಯಿಂದಾಗಿ ಇಂದು 1 ಕೆ.ಜಿ ಅಕ್ಕಿ ಖರೀದಿಸಲು ಸಾಧ್ಯವಾಗುತ್ತಿಲ್ಲ.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣಾ ಅಭ್ಯರ್ಥಿ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ, ಕಾಂಗ್ರೆಸ್ ನಾಯಕರಾದ ಎಂ.ಎ ಗಫೂರ್, ಪ್ರಖ್ಯಾತ್ ಶೆಟ್ಟಿ, ಭಾಸ್ಕರ್ ರಾವ್ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.