ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ರವರ ಪ್ರಥಮ ವರ್ಷದ ಪುಣ್ಯ ತಿಥಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಆಸ್ಕರ್ ಫರ್ನಾಂಡಿಸ್ ರವರ ಪ್ರತಿಮೆ ಅನಾವರಣ ಗೊಳಿಸಿದರು.
ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಭಾಷಣ – ರಸ ಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಎಂ.ಎ ಗಫೂರ್ ಉಪಸ್ಥಿತರಿದ್ದರು.


















