ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಇಂದು ಹೊರಟಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂತ್ರಸ್ತೆಯ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಸೇರಿದಂತೆ ನೂರಾರು ಕಾರ್ಯಕರ್ತರೊಂದಿಗೆ ಹತ್ರಾಸ್ಗೆ ತೆರಳುತ್ತಿದ್ದ ರಾಹುಲ್ ಗಾಂಧಿಯವರ ವಾಹನಗಳನ್ನು ಪೊಲೀಸರು ಗ್ರೇಟರ್ ನಾಯ್ಡಾ ಬಳಿ ಪರಿಚೌಕದಲ್ಲಿ ತಡೆದಿದ್ದರು.
ನಂತರ ರಾಹುಲ್, ಪ್ರಿಯಾಂಕಾ ಸೇರಿದಂತೆ ನೂರಾರು ಕಾರ್ಯಕರ್ತರು ಕಾಲ್ನಡಿಗೆಯಲ್ಲೇ ಹತ್ರಾಸ್ನತ್ತ ಹೊರಟರು. ಈ ವೇಳೆ ಪ್ರಿಯಾಂಕ, ರಾಹುಲ್ ಇಬ್ಬರನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಯಿತು.