ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಬಿಜೆಪಿಗೆ ಸೇರ್ಪಡೆ

ಉಡುಪಿ: ಕಾಂಗ್ರೆಸ್ ಮುಖಂಡ, ತಾಪಂ ಮಾಜಿ ಸದಸ್ಯ ಉಮೇಶ್ ನಾಯ್ಕ್ ಚೇರ್ಕಾಡಿ ಅವರು ತಮ್ಮ ಬೆಂಬಲಿಗರೊಂದಿಗೆ ಇಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.

ಇವರೊಂದಿಗೆ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ವರ್ಗದ ಅಧ್ಯಕ್ಷರಾಗಿದ್ದ ರಾಘವೇಂದ್ರ ಜೆ.ಪಿ., ಹಾರಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಜಯಲಕ್ಷ್ಮೀ ಶೆಟ್ಟಿ, ನೀಲಾವರ ಗ್ರಾಪಂ ಮಾಜಿ ಉಪಾಧ್ಯಕ್ಷ ರಮೇಶ್ ಪೂಜಾರಿ, ಗ್ರಾಪಂ ಸದಸ್ಯೆ ಹೇಮಾ ವಿ. ಬಾಸ್ರಿ ಮೊದಲಾದವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ಜಿಪಂ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ, ರವಿ ವಿ. ಅಮೀನ್ , ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ವಿ. ನಾಯ್ಕ್, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಶೆಟ್ಟಿ, ತಾಪಂ ಸದಸ್ಯೆ ನಳಿನಿ ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.