ಬೆಂಗಳೂರು: ಕಾಂಗ್ರೆಸ್ ಮೈತ್ರಿಗೆ ಯೋಗ್ಯವಾದ ಪಕ್ಷವಲ್ಲ. ಮೈತ್ರಿಧರ್ಮ ಪಾಲಿಸಲು ಅವರಿಗೆ ಗೊತ್ತಿಲ್ಲ. ಹಾಗಾಗಿ ಅವರೊಂದಿಗೆ ಎಂದೂ ಮೈತ್ರಿ ಇಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದರು.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ತೆರೆ ಎಳೆದರು.
ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸಲು ಯೋಗ್ಯವಾದ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಹಾಗೂಬ ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ ಪಿ ಶಾಸಕರನ್ನೇ ಸೆಳೆದಿರುವುದು ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ ಎಂದು ಟ್ವೀಟರ್ ಮೂಲಕ ಕಿಡಿಕಾರಿದರು.