ಉಡುಪಿ: ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ 169ಎ ಯ ಅಸಮರ್ಪಕ ಅಗಲೀಕರಣ ಕಾಮಗಾರಿಯನ್ನು ವಿರೋಧಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನವೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಪರ್ಕಳ ಗಾಂಧಿ ಮೈದಾನದಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಹಾಗೂ
ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಾಗಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ ಭಂಡಾರ್ಕಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.