ಉಡುಪಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿ ಸೇರ್ಪಡೆ

ಉಡುಪಿ: ಭಾರತೀಯ ಜನತಾ ಪಕ್ಷನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ. ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾನುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ದಿ. ಚಂದ್ರಕಾಂತ್ ಶಣೈ ಅವರ ಮಗ ಅಭಯ್ ಶಣೈ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ ಸೂರ್ಯಕಾಂತ್ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು ಉಪಸ್ಥಿತರಿದ್ದರು