ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ವಿಚಾರಣೆ ಹಾಗೂ ಪಕ್ಷದ ನಾಯಕರುಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜೂನ್ 17 ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಕಂಟ್ರಿ ಇನ್ ಹೋಟೆಲ್ ಬಳಿ ಇರುವ ಸರ್ಕಲ್ ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಜಿಲ್ಲೆಯ ಪಕ್ಷದ ನಾಯಕರುಗಳು, ಬ್ಲಾಕ್ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರು, ಪಕ್ಷದ ಎಲ್ಲಾ ಕಾರ್ಯಕರ್ತರು ಈ ಪ್ರತಿಭಟನಾ ಕಾರ್ಯಕ್ರಮದಲ್ಲಿಭಾಗವಹಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ ನರಸಿಂಹಮೂರ್ತಿ ಕರೆ ನೀಡಿದ್ದಾರೆ.