ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಮಸ್ಕಿ: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ‌ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಬಸನಗೌಡ ಅವರು 86,222 ಮತಗಳನ್ನು ಪಡೆದು 30,641 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ 55,581 ಮತಗಳನ್ನು ಪಡೆದು ಪರಾಭವಗೊಂಡರು.

ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.