ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ರಾಮಮಂದಿರ ನಿರ್ಮಾಣ ಟ್ರಸ್ಟ್ ನ ಜಂಟಿ ನೇತೃತ್ವದಲ್ಲಿ ನವೆಂಬರ್ 10 ಮತ್ತು 11 ರಂದು ಎರಡು ದಿನಗಳ ಕಾಲ ದೆಹಲಿಯಲ್ಲಿ ಸಂತ ಸಮಾವೇಶ ನಡೆಯಲಿದೆ ಎಂದು ರಾಮಮಂದಿರ ನಿರ್ಮಾಣ ಟ್ರಸ್ಟ್ ನ ಟ್ರಸ್ಟಿಯೂ ಆಗಿರುವ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.
ನೀಲಾವರ ಗೋಶಾಲೆಯಲ್ಲಿರುವ ಪೇಜಾವರ ಶಾಖಾ ಮಠದಲ್ಲಿ ಶ್ರೀಪಾದರು ಇಂದು ಸುದ್ದಿಗಾರರಿಗೆ ತಿಳಿಸಿದರು.
ಈ ಸಮಾವೇಶದಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಸಮಾವೇಶದ ಬಳಿಕ ಪೇಜಾವರ ಮಠದ ಶಾಖಾ ಮಠಗಳ ಚಟುವಟಿಕೆಗಳ ಬಗ್ಗೆ ಪರಿಶೀಲನೆ ಮಾಡಲಾಗುವುದು. ಜೊತೆಗೆ ಉತ್ತರ ಭಾರತದ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು ಎಂದು ತಿಳಿಸಿದರು.