ಕೊಲ್ಲೂರಿನಿಂದ ಕೊಡಚಾದ್ರಿಗೆ ರೋಪ್ ವೇ ನಿರ್ಮಾಣ: ಡಿಪಿಆರ್ ಸರ್ವೇ ಕಾರ್ಯಕ್ಕೆ ಚಾಲನೆ

ಕುಂದಾಪುರ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸಲು ಸರ್ಕಾರ ಮುಂದಾಗಿದೆ.

ಕೊಲ್ಲೂರು ಶ್ರೀ ಮೂಕಾಂಬಿಕೆ ಕ್ಷೇತ್ರದಿಂದ ಕೊಡಚಾದ್ರಿಗೆ ತೆರಳಲು ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ರೋಪ್ ವೇ ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದರ ಡಿ.ಪಿ.ಆರ್. ಸರ್ವೇ ಕಾರ್ಯಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬೈಂದೂರು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಇಂದು ಚಾಲನೆ ನೀಡಿದ್ದಾರೆ.

ಬಳಿಕ ಮಾತನಾಡಿದ ಶಾಸಕರು, ಕೊಲ್ಲೂರಿನಿಂದ ಕೊಡಚಾದ್ರಿಗೆ ರೋಪ್ ವೇ ನಿರ್ಮಿಸುವುದು ಬಹುವರ್ಷಗಳ ಕನಸು. ಇದರಿಂದ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸುವುದರ ಜತೆಗೆ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ ಎಂದರು.

ಪರಿಸರ, ಅರಣ್ಯಕ್ಕೆ ಯಾವುದೇ ಹಾನಿಯಾಗದಂತೆ ವೈಜ್ಞಾ‌ನಿಕ ರೀತಿಯ ಕಾಮಗಾರಿ‌ ನಡೆಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾಪಂಚಾಯತ್ ಸದಸ್ಯ ಶಂಕರ್ ಪೂಜಾರಿ, ಉದ್ಯಮಿ ವೆಂಕಟೇಶ್ ಕಿಣಿ,   ಮುಖಂಡರಾದ ಅತುಲ್ ಕುಮಾರ್ ಶೆಟ್ಟಿ, ಪ್ರಕಾಶ್ ಪೂಜಾರಿ ಜಡ್ಡು, ಸಂತೋಷ್ ಭಟ್, ಚಂದ್ರಯ್ಯ ಆಚಾರ್ ಕಳಿ ಮೊದಲಾದವರು ಇದ್ದರು.