ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇದೀಗ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರಿನ ಉತ್ತರ ತಾಲ್ಲೂಕಿನ ಮಾದವಾರ ಬಳಿಯ ಬಿಐಇಸಿಯಲ್ಲಿ 10,100 ಬೆಡ್ ಗಳ ಕೊವಿಡ್ ಕೇರ್ ಸೆಂಟರ್ ಅನ್ನು ಸಿದ್ಧಪಡಿಸಿದೆ.
ಇಂದು ಕೊವಿಡ್ ಕೇರ್ ಸೆಂಟರ್ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಕೊವಿಡ್ ಕೇರ್ ಸೆಂಟರ್ ಒಂದು ವಾರದೊಳಗೆ ಸೋಂಕಿತರ ಚಿಕಿತ್ಸೆಗೆ ಮುಕ್ತವಾಗಲಿದೆ. ಇಲ್ಲಿ ಎಲ್ಲ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು.
100 ಜನರಿಗೆ ಒಬ್ಬ ವೈದ್ಯ, ಇಬ್ಬರು ನರ್ಸ್, ನರ್ಸ್ ಸಹಾಯಕರು, ಸ್ವಚ್ಚತಾ ಸಿಬ್ಬಂದಿ ಹಾಗೂ ಮಾರ್ಷಲ್ ಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಸಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ರಾಜ್ಯದಲ್ಲಿ ಉಂಟಾಗಿರುವ ಲೋಷದೋಷಗಳನ್ನು ಸರಿಪಡಿಸುತ್ತೇವೆ. ದಯವಿಟ್ಟು ಜನರು ಯಾರು ಸಹ ಬೆಂಗಳೂರಿನಿಂದ ಊರಿನ ಕಡೆಗೆ ಹೋಗಬಾರದು ಎಂದು ಮನವಿ ಮಾಡಿದರು.
ಶಾಸಕರು ತಮ್ಮ ಕ್ಷೇತ್ರದ ಕೊವಿಡ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲನೆ ಮಾಡಬೇಕು. ತಮ್ಮ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣಕ್ಕೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.