ಹಿರಿಯಡ್ಕ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಗೆಲುವಿಗಾಗಿ ಮಾ.29 ರಂದು ಕಾರ್ಯಕರ್ತರ ಸಭೆ

ಹಿರಿಯಡ್ಕ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗಾಗಿ ನಡೆಯುವ ಚುನಾವಣೆ ಎಂದೇ ಬಿಂಬಿತವಾಗಿರುವ 2024ರ ಲೋಕಸಭಾ ಚುನಾವಣೆಯ ತಯಾರಿಯ ಪೂರ್ವಭಾವಿಯಾಗಿ, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಮರ್ಥ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ ಮುಖಂಡರನ್ನು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣಾ ಸಿದ್ಧತೆ ಮತ್ತು ರೂಪುರೇಷೆಗಳ ಬಗ್ಗೆ ಸಮಾಲೋಚಿಸುವ ಸಲುವಾಗಿ ಮಾ. 29 ರಂದು ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಪಕ್ಷದ ರಾಜ್ಯ, ಜಿಲ್ಲಾ ಮತ್ತು ಬ್ಲಾಕ್ ಸಮಿತಿಯ ಪದಾಧಿಕಾರಿಗಳು, ಪ್ರಚಾರ ಸಮಿತಿಯ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಸೇವಾದಳ, ಎನ್. ಎಸ್. ಯು. ಐ., ಇಂಟಕ್, ನಗರ ಕಾಂಗ್ರೆಸ್ ಸಮಿತಿ, ಹಿಂದುಳಿದ ವರ್ಗಗಳ ಘಟಕ, ಅಲ್ಪಸಂಖ್ಯಾತರ ಘಟಕ, ಎಸ್.ಸಿ / ಎಸ್.ಟಿ ಘಟಕ, ಕಿಸಾನ್ ಕಾಂಗ್ರೆಸ್ ಘಟಕ, ಮೀನುಗಾರ ಕಾಂಗ್ರೆಸ್ ಘಟಕ, ಕಾನೂನು ಘಟಕ, ಸಾಮಾಜಿಕ ಜಾಲತಾಣ ಘಟಕ, ಗ್ರಾಮೀಣ ಕಾಂಗ್ರೆಸ್ ಹಾಗೂ ಬೂತ್ ಸಮಿತಿಗಳ ಎಲ್ಲಾ ಅಧ್ಯಕ್ಷರು/ ಪದಾಧಿಕಾರಿಗಳು, ಬಿ. ಎಲ್. ಎ – 2 ಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಮತ್ತು ಪುರಸಭೆಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು/ಉಪಾಧ್ಯಕ್ಷರು/ಸದಸ್ಯರು, ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತೆ ಕೆ. ಪಿ.ಸಿ.ಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ
ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ(ಉತ್ತರ) ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು
ತಿಳಿಸಿದ್ದಾರೆ.