ಇಸ್ರೇಲ್ ದೇಶದಲ್ಲಿರುವ ನಾಗರಿಕರ ಮಾಹಿತಿಗಾಗಿ ಕಂಟ್ರೋಲ್ ರೂಂ ಸಂಪರ್ಕಿಸಿ

ಉಡುಪಿ: ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ, ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077 ಹಾಗೂ 0820- 2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.