ಆರು ತಿಂಗಳೊಳಗೆ ಕೊರೊನಾ ನಿಯಂತ್ರಿಸಿ: ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಕೊರೊನಾ ಪರೀಕ್ಷೆಗಳನ್ನು ಹೆಚ್ಚಿಸುವುದರ ಜತೆಗೆ ಅಗತ್ಯ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮುಂದಿನ ಆರು ತಿಂಗಳೊಳಗೆ ಕೋವಿಡ್ ನಿಯಂತ್ರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ.

ಕೋವಿಡ್ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಜತೆ ಕರ್ನಾಟಕ ಸಹಿತ ಏಳು ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಡೆದ ವಿಡಿಯೋ ಸಂವಾದ ನಡೆಯಿತು.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ವೈಜ್ಞಾನಿಕ ಪರೀಕ್ಷೆ ಮತ್ತು ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಕೋವಿಡ್‍ನಿಂದ ಮರಣ ಹೊಂದಿರುವವರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಕೇಂದ್ರ ನಿರ್ದೇಶನ ನೀಡಿದೆ.

ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಜೊತೆಗೆ ನಿರ್ಬಂಧಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೀವ ಹಾಗೂ ಜೀವನ ಉಳಿಸುವ ಉದ್ದೇಶದಿಂದ ಆರ್ಥಿಕ ಚಟುವಟಿಕೆಯನ್ನು ಸೂಕ್ತ ಪರೀಕ್ಷಾ ಮತ್ತು ಆಸ್ಪತ್ರೆ ಸೌಕರ್ಯಗಳನ್ನು ಖಚಿತಪಡಿಸಿಕೊಂಡು ಹಂತ ಹಂತವಾಗಿ ಆರಂಭಿಸಬೇಕು. ಮನೆ ಆರೈಕೆಯಲ್ಲಿರುವ ಸೋಂಕಿತರ ನಿರಂತರ ಮೇಲ್ವಿಚಾರಣೆ ಕಡ್ಡಾಯ. ಸೂಕ್ಷ್ಮ ಕಂಟೈನ್‌ಮೆಂಟ್ ವಲಯಗಳನ್ನು ರೂಪಿಸಬೇಕು ಎಂದೂ ಸಲಹೆ ನೀಡಲಾಗಿದೆ.