ಉಡುಪಿ: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶದ ಸಂಚಾಲಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ನೇತೃತ್ವದಲ್ಲಿ ನಡೆದ ವಿವಿಧ ಮೋರ್ಚಾಗಳ ರಾಜ್ಯ ಪದಾಧಿಕಾರಿಗಳು ಮತ್ತು ಆಹ್ವಾನಿತರ ಸಭೆಯಲ್ಲಿ ಬಿಜೆಪಿ ಮೋರ್ಚಾ ಸಮಾವೇಶಗಳ ಸಹ ಸಂಚಾಲಕ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಸಭೆಯಲ್ಲಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಶ್ರೀಮತಿ ಗೀತಾ ವಿವೇಕಾನಂದ, ಎಸ್ ಟಿ. ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್, ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ ನೆಲ ನರೇಂದ್ರ ಬಾಬು, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಕುಮಾರ್ ಉಪಸ್ಥಿತರಿದ್ದರು.