ಕೊರೊನಾ: ಉಡುಪಿ ಜಿಲ್ಲೆಯಲ್ಲಿ 210, ಎಂಐಟಿ ಕ್ಯಾಂಪಸ್ ನಲ್ಲಿ 184 ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಜನರಲ್ಲಿ ಭೀತಿ ಹುಟ್ಟಿಸುತ್ತಿದೆ.
ಇಂದು ಜಿಲ್ಲೆಯಲ್ಲಿ 210 ಕೊರೊನಾ ಕೇಸ್ ಕಾಣಿಸಿಕೊಂಡಿದ್ದು, ಕಂಟೈನ್ ಮೆಂಟ್ ಝೋನ್ ಆಗಿರುವ ಮಣಿಪಾಲದ ಎಂಐಟಿ ಕ್ಯಾಂಪಸ್ ನಲ್ಲಿ 184 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.