ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ಮುಂದುವರಿದಿದ್ದು, ಶನಿವಾರ ಜಿಲ್ಲೆಯಲ್ಲಿ 1047 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5958ಕ್ಕೆ ಏರಿಕೆಯಾಗಿದೆ.
ಉಡುಪಿ ತಾಲ್ಲೂಕಿನಲ್ಲಿ ಅತೀ ಹೆಚ್ಚು 645, ಕುಂದಾಪುರ 347, ಕಾರ್ಕಳ 45 ಹಾಗೂ ಹೊರ ಜಿಲ್ಲೆಯ 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೇ 7ರಂದು 2807 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 328 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 75, 73, 68 ಮತ್ತು 76 ವರ್ಷದ ನಾಲ್ವರು ವೃದ್ಧ ಮಹಿಳೆಯರು, 78 ವರ್ಷದ ವೃದ್ಧ, ಕುಂದಾಪುರ ತಾಲೂಕಿನ 55 ವರ್ಷದ ಮಹಿಳೆ ಹಾಗೂ ಕಾರ್ಕಳ ತಾಲೂಕಿನ 41 ವರ್ಷದ ಪುರುಷ, 76 ವರ್ಷದ ಮಹಿಳೆ, 69 ಮತ್ತು 66 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 525950 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 38916 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 32730 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 228 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.