ಉಡುಪಿ: ಇಂದು 962 ಮಂದಿಗೆ ಕೊರೊನಾ ಪಾಸಿಟಿವ್; 5 ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಭಾನುವಾರ ಕೂಡ ಜಿಲ್ಲೆಯಲ್ಲಿ 962 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6372ಕ್ಕೆ ಏರಿಕೆಯಾಗಿದೆ.

ಉಡುಪಿ ತಾಲ್ಲೂಕಿನಲ್ಲಿ 309, ಕುಂದಾಪುರದಲ್ಲಿ 266, ಕಾರ್ಕಳದಲ್ಲಿ 384 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮೇ 8ರಂದು 2550 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 543 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 58, 63 ಹಾಗೂ 58 ವರ್ಷದ ವ್ಯಕ್ತಿಗೆ ಮತ್ತು ಕುಂದಾಪುರ ತಾಲೂಕಿನ 66 ವರ್ಷದ ವ್ಯಕ್ತಿ ಹಾಗೂ ಮಹಿಳೆ ಹಾಗೂ 67 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 528500 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 39878 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 33273 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ  ಜಿಲ್ಲೆಯಲ್ಲಿ 233 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.