ದೇಶದಲ್ಲಿ ಕೊರೊನಾ ಮತ್ತಷ್ಟು ಇಳಿಕೆ: ಕಳೆದ 24 ಗಂಟೆಗಳಲ್ಲಿ ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ, ಡಿಸ್ಚಾರ್ಜ್ ವಿವರ ಹೀಗಿದೆ

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 1,27,510 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 2,795 ಮಂದಿ ಮೃತಪಟ್ಟಿದ್ದಾರೆ. 2,55,287 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಸದ್ಯ 18,95,520 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿಗೊಳಗಾದವರ ಒಟ್ಟು ಸಂಖ್ಯೆ 2,81,75,044 ಹಾಗೂ ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 2,59,47,629. ಒಟ್ಟು 3,31,895 ಮಂದಿ ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.  ಇನ್ನು ಈವರೆಗೆ ದೇಶದಲ್ಲಿ21,60,46,638 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

ಕೊರೊನಾ ಅಂಕಿ-ಅಂಶಗಳು

ಒಟ್ಟು ಪ್ರಕರಣಗಳು –2,81,75,044

ಒಟ್ಟು ಗುಣಮುಖರಾದವರು –2,59,47,629

ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರು –3,31,895

ಸಕ್ರಿಯ ಪ್ರಕರಣಗಳು –18,95,520

ಈವರೆಗೆ ವ್ಯಾಕ್ಸಿನ್ ಪಡೆದವರು –21,60,46,638