ಕೊರೊನಾಗೆ ದ.ಕ. ಜಿಲ್ಲೆಯಲ್ಲಿ ಮೊದಲ ಬಲಿ: ಬಂಟ್ವಾಳದ ಮಹಿಳೆ ಸಾವು

ಮಂಗಳೂರು: ಕೊರೋನ ಮಾಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ ಮಹಿಳೆ ಇಂದು ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 45 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ನಿನ್ನೆ ಬಂಟ್ವಾಳ ತಾಲೂಕು ಆಸ್ಪತ್ರೆಗೆ ತೆರಳಿದ್ದು, ಅಲ್ಲಿಂದ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಥ್ರೋಟ್ ಸ್ಕ್ವಾಬ್ ನ್ನು ನಿನ್ನೆಯೇ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ ತೀವ್ರ ಉಸಿರಾಟದ ತೊಂದರೆಯಿಂದ ಮಹಿಳೆ ಸಾವನ್ನಪ್ಪಿದ್ದಾರೆ.
ಸ್ಯಾಂಪಲ್ ಟೆಸ್ಟ್ ವರದಿ ಬರುವ ಮೊದಲೇ ಸಾವನ್ನಪ್ಪಿದ್ದು, ಈಗ ಬಂದ ವರದಿಯಲ್ಲಿ ಕೊರೊನ ಪಾಸಿಟಿವ್ ಎಂದು ತಿಳಿದುಬಂದಿದೆ.