ಕೊರೊನಾ ನಾಲ್ಕನೇ ಅಲೆ ಆತಂಕ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ವಿಶೇಷ ಸಭೆ

ಬೆಂಗಳೂರು: ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಮತ್ತೆ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೇರಳ ಸೇರಿದಂತೆ ಅನೇಕ ಭಾಗಗಳಲ್ಲಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್‌ 27ರಂದು ವಿಡಿಯೋ ಕಾನ್ಫರೆನ್ಸ್‌ ಮೂಲಕ ಸೂಚನೆಯನ್ನು ನೀಡಲಿದ್ದಾರೆ, ಆ ಬಳಿಕ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಇಂದು ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಧ್ಯಾಹ್ನ 12.30 ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ಕುರಿತಂತೆ ವಿಶೇಷ ಸಭೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣ ಉಲ್ಬಣಗೊಳ್ಳುತ್ತಿರುವ ಮತ್ತು ನಿಯಂತ್ರಣ ಕ್ರಮಗಳ ಕುರಿತು ಸಿಎಂ ಬೊಮ್ಮಾಯಿ ಮಾಹಿತಿ ಪಡೆಯಲಿದ್ದಾರೆ.

ಸಭೆಯಲ್ಲಿ ಆರೋಗ್ಯ ಸಚಿವರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆಯ‌ ಅಧಿಕಾರಿಗಳು, ಸರ್ಕಾರದ ಹಿರಿಯ ಅಧಿಕಾರಿಗಳು ಸೇರಿದಂತೆ ಕೆಲ ಸಚಿವರು ಭಾಗಿಯಾಗಲಿದ್ದಾರೆ.