ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ: ಒಂದು ವಾರ ಲಾಕ್ ಡೌನ್ ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ತೀವ್ರಗತಿಯಲ್ಲಿ ಹಬ್ಬುತ್ತಿದ್ದು, ಇದನ್ನು ತಡೆಗಟ್ಟುವುದೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಕೊರೊನಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಬೆಂಗಳೂರು ಸಹಿತ ಏಳು ಜಿಲ್ಲೆಗಳಲ್ಲಿ ಮಂಗಳವಾರದಿಂದ ಒಂದು ವಾರ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಸಿಎಂ ಯಡಿಯೂರಪ್ಪನವರು ಈ ಬಗ್ಗೆ ಹಿರಿಯ ಸಚಿವರೊಂದಿಗೆ ಅಭಿಪ್ರಾಯ ‌ಹಂಚಿಕೊಂಡಿದ್ದಾರೆ.  ಇದಕ್ಕೆ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು, ದಕ್ಷಿಣ ಕನ್ನಡ, ಬೀದರ್, ಬಳ್ಳಾರಿ, ಮೈಸೂರು, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ದಿನೇ ದಿನೇ ಕೊರೊನಾ ಹೆಚ್ಚಳವಾಗುತ್ತಿದ್ದು, ಇದನ್ನು ತಡೆಗಟ್ಟಲು ಲಾಕ್ ಡೌನ್ ಮೊರೆ ಹೋಗಲು ಸರ್ಕಾರ ಚಿಂತನೆ ನಡೆಸಿದೆ. ಅದರಂತೆ ಮಂಗಳವಾರದಿಂದ ಒಂದು ವಾರ ಕಾಲ ಲಾಕ್ ಡೌನ್‌ ಮಾಡುವ ಸಾಧ್ಯತೆ. ಬಹುತೇಕ ಇಂದೇ ರಾತ್ರಿಯೇ ಸಿಎಂ ಲಾಕ್ ಡೌನ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.