ಉಡುಪಿ: ಇಂದು 855 ಮಂದಿಗೆ ಕೊರೊನಾ ಪಾಸಿಟಿವ್; 3 ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಸೋಮವಾರ ಜಿಲ್ಲೆಯಲ್ಲಿ 855 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6582ಕ್ಕೆ ಏರಿಕೆಯಾಗಿದೆ.
ಉಡುಪಿ ತಾಲ್ಲೂಕಿನಲ್ಲಿ 452, ಕುಂದಾಪುರ 369, ಕಾರ್ಕಳ 30 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮೇ 9ರಂದು 2512 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 642 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 72 ವರ್ಷದ ವೃದ್ಧೆ, 50 ವರ್ಷದ ಮಹಿಳೆ ಹಾಗೂ 73 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 531012 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 40733 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 33915 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ  ಜಿಲ್ಲೆಯಲ್ಲಿ 236 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.