ಉಡುಪಿ: ಇಂದು 919 ಮಂದಿಗೆ ಕೊರೊನಾ ಪಾಸಿಟಿವ್; 837 ಮಂದಿ ಡಿಸ್ಚಾರ್ಜ್, 6 ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಇಂದು (ಮೇ 12) 919 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6952ಕ್ಕೆ ಏರಿಕೆಯಾಗಿದೆ.

ಉಡುಪಿ ತಾಲ್ಲೂಕಿನಲ್ಲಿ 576, ಕುಂದಾಪುರ 257, ಕಾರ್ಕಳ 83 ಹಾಗೂ ಹೊರ ಜಿಲ್ಲೆಯ 3 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೇ 11ರಂದು 2957 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 837 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 75 ಮತ್ತು 80 ವರ್ಷದ ಇಬ್ಬರು ವೃದ್ಧರು, 88 ವರ್ಷದ ವೃದ್ಧೆ, ಕುಂದಾಪುರ ತಾಲೂಕಿನ 58 ವರ್ಷದ ವ್ಯಕ್ತಿ, 68 ವರ್ಷದ ವ್ಯಕ್ತಿ ಹಾಗೂ 77 ವರ್ಷದ ವೃದ್ದರೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 537062 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42736 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 35539 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ  ಜಿಲ್ಲೆಯಲ್ಲಿ 245 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.