ಕೊರೊನಾ ನಿಯಂತ್ರಣಕ್ಕೆ ಬಂದಿಲ್ಲ: ಕೆಲ ನಿರ್ಬಂಧಗಳ ಸಡಿಲಿಕೆಯೊಂದಿಗೆ ಲಾಕ್ ಡೌನ್ ಮುಂದುವರಿಕೆ; ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಜೂನ್ 7ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಿಕೊಂಡು ಲಾಕ್​​​ಡೌನ್​ ಮುಂದುವರಿಸುತ್ತೇವೆ. ಈ ಬಗ್ಗೆ ಇಂದು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಳ್ಳಿಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಆದ್ದರಿಂದ ಲಾಕ್​​ಡೌನ್​ ಮುಂದುವರಿಯುತ್ತದೆ. ಉಳಿದಂತೆ ಗುರುವಾರದಿಂದ ಕೈಗಾರಿಕೆಗಳ ರಫ್ತು ಘಟಕಗಳಿಗೆ ಅನುಮತಿ ನೀಡಲಾಗುತ್ತದೆ. ಈ ಬಗ್ಗೆ ಚರ್ಚೆ ಬಳಿಕವೇ ಅಂತಿಮ ನಿರ್ಧಾರ ಮಾಡಲಾಗುವುದು ಎಂದರು.

ಮುಂದಿನ ಎರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್​ ಘೋಷಣೆ ಮಾಡುತ್ತೇವೆ. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕೆಲ ನಿರ್ಬಂಧಗಳ ಸಡಿಲಿಕೆಯೊಂದಿಗೆ ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು.