ಬ್ರಹ್ಮಾವರ ವಿದ್ಯಾಲಕ್ಷ್ಮೀ ಗ್ರೂಫ್ ಆಫ್ ಇನ್ ಸ್ಟಿಟ್ಯೂಷನ್ ಕಾಲೇಜಿನಲ್ಲಿ ಕೊರೊನಾ ಲಸಿಕಾ ಅಭಿಯಾನ

ಉಡುಪಿ: ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಗ್ರೂಫ್ ಆಫ್ ಇನ್ ಸ್ಟಿಟ್ಯೂಷನ್ ಕಾಲೇಜಿನಲ್ಲಿ ಕೊರೊನಾ ಲಸಿಕಾ ಅಭಿಯಾನ ಆರಂಭವಾಗಿದ್ದು, ಮೊದಲ ದಿನದಂದು 143 ಡೋಸ್ ಲಸಿಕೆಯನ್ನು ನೀಡಲಾಗಿದೆ.

ಬ್ರಹ್ಮಾವರ ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಜೀತ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷ ಸುಬ್ರಹ್ಮಣ್ಯ, ನಿರ್ದೇಶಕಿ ಮಮತ, ಕಾಲೇಜಿನ ಪ್ರಾಂಶುಪಾಲೆ ಸೀಮಾ ಜಿ. ಭಟ್‌ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.