ಉಡುಪಿಯಲ್ಲಿ ಇಂದು 113 ಮಂದಿಗೆ ಕೊರೊನಾ ಪಾಸಿಟಿವ್: 21 ವರ್ಷದ ಯುವಕ ಸಹಿತ ಇಬ್ಬರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 113 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12840 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇನ್ನೂ 1780 ಸಕ್ರಿಯ ಕೊರೊನಾ ಸೋಂಕಿತರಿದ್ದು, 882 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 898 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

*183 ಮಂದಿ ಗುಣಮುಖ*
ಜಿಲ್ಲೆಯಲ್ಲಿ ಇಂದು 183 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 74 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 109 ಮಂದಿ ಸಹಿತ 183 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 10946 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

*ಇಬ್ಬರು ಕೊರೊನಾಗೆ ಬಲಿ*
ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 21 ವರ್ಷದ ಯುವಕ ಹಾಗೂ  55 ವರ್ಷದ ವ್ಯಕ್ತಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 114ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.