ಉಡುಪಿಯಲ್ಲಿ ಇಂದು 226 ಮಂದಿಗೆ ಕೊರೊನಾ ಪಾಸಿಟಿವ್: ನಾಲ್ವರು ಕೊರೊನಾಗೆ ಬಲಿ

ಉಡುಪಿ: ಜಿಲ್ಲೆಯಲ್ಲಿ ಇಂದು 226 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12150 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇನ್ನೂ 2115 ಸಕ್ರಿಯ ಕೊರೊನಾ ಸೋಂಕಿತರಿದ್ದು, 1045 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1070 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

*328 ಮಂದಿ ಗುಣಮುಖ*
ಜಿಲ್ಲೆಯಲ್ಲಿ ಇಂದು 328 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 134 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 194 ಮಂದಿ ಸಹಿತ 328 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 9929 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

*ನಾಲ್ವರು ಕೊರೊನಾಗೆ ಬಲಿ*
ಜಿಲ್ಲೆಯಲ್ಲಿ ಇಂದು ನಾಲ್ಕು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಉಡುಪಿ ತಾಲ್ಲೂಕಿನ 45 ವರ್ಷದ ಮಹಿಳೆ, 65 ವರ್ಷದ ವ್ಯಕ್ತಿ, ಕಾರ್ಕಳ ತಾಲ್ಲೂಕಿನ 85 ವರ್ಷದ ವೃದ್ಧ ಹಾಗೂ ಕುಂದಾಪುರ ತಾಲ್ಲೂಕಿನ 46 ವರ್ಷದ ವ್ಯಕ್ತಿ ಕೊರೊನಾಗೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.