ಉಡುಪಿಯಲ್ಲಿ ಹತ್ತು ಸಾವಿರದ ಗಡಿದಾಟಿದ ಕೊರೊನಾ ಸೋಂಕಿತರ ಸಂಖ್ಯೆ: ಇಂದು 348 ಮಂದಿಗೆ ಕೊರೊನಾ ಪಾಸಿಟಿವ್

ಉಡುಪಿ: ಜಿಲ್ಲೆಯಲ್ಲಿ ಇಂದು 348 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10016 ಕ್ಕೆ ಏರಿಕೆಯಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 51 ಮಂದಿ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 184 ಮಂದಿ ಸಹಿತ 235 ಸೋಂಕಿತರು ಇಂದು ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 7092 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇನ್ನೂ 2842 ಸಕ್ರಿಯ ಕೊರೊನಾ ಸೋಂಕಿತರಿದ್ದು, 1175 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1667 ಮಂದಿ ಸೋಂಕಿತರು ಹೋಮ್ ಐಸೋಲೇಷನ್ ನಿಗಾದಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.