ಮುಂಬೈ: ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೊರೊನಾ ಸೋಂಕು ಬಂದಿರುವ ಬಗ್ಗೆ ಸ್ವತಃ ಬಚ್ಚನ್ ಅವರೇ ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ.
ಸದ್ಯ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬಸ್ಥರು ಹಾಗೂ ಸಿಬ್ಬಂದಿ ಸಹ ಕೊರೊನಾ ಟೆಸ್ಟ್ ಗೆ ಒಳಗಾಗಿದ್ದು, ಇನ್ನೂ ಅದರ ವರದಿ ಬಂದಿಲ್ಲ.
‘ಕಳೆದ ಹತ್ತು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆ ಮಾಡಿಸಿ, ನನ್ನ ಸಂಪರ್ಕಿತರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಅಮಿತಾಭ್ ಬಚ್ಚನ್ ಮನವಿ ಮಾಡಿದ್ದಾರೆ.