ಉಡುಪಿ: ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಕಾರಣ ಸ್ವಲ್ಪದಿನಗಳ ಕಾಲ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ಗೆ ಒಳಗಾಗಿ ಜಾಗೃತೆವಹಿಸಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.