udupixpress
Home Trending ಕೊರೊನಾ ಭೀತಿ: ಸಿಇಟಿ ಪರೀಕ್ಷೆ ಮುಂದೂಡಿಕೆ

ಕೊರೊನಾ ಭೀತಿ: ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಜಾಸ್ತಿಯಾದ ಕಾರಣ ಬರುವ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಬರುವ ತಿಂಗಳು ಏ.22 ರಿಂದ ಏ.24ವರೆಗೆ ಸಿಇಟಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿತ್ತಿರುವ ಹಿನ್ನಲೆ ಪ್ರಧಾನಿ ಮೋದಿ ಅವರು ದೇಶವನ್ನು ಏ.14ವರೆಗೆ ಲಾಕ್‍ಡೌನ್ ಮಾಡಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಇನ್ನೂ ನಿಯಂತ್ರಣಕ್ಕೆ ಬಾರದ ಕಾರಣ ಹಾಗೂ ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಹೇಳಿಕೆ ಹೊರಡಿಸಿದ್ದು, ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ. ಹಾಗೂ ಈ ಸಿಇಟಿ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದೆ ನಿಗದಿ ಮಾಡಲಾಗುತ್ತದೆ ಎಂದಿದೆ.

error: Content is protected !!