ಜಗಿತ್ತಿನಾದ್ಯಂತ ಆತಂಕ ಸೃಷ್ಟಿ ಮಾಡಿದ ಕೊರೊನಾಗೆ ಇಂದು ದೇಶದಲ್ಲಿ ಮೂರನೇ ಬಲಿ ಪಡೆದುಕೊಂಡಿದೆ. ಭಾರತದಲ್ಲಿ ಕೊರೊನಾ ವೈರಸ್ ನಿಂದ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಇಂದು ಹಿಮಾಚಲ ಪ್ರದೇಶದಲ್ಲಿ 69 ವರ್ಷದ ವೃದ್ಧ ಸಾವನ್ನಪ್ಪಿದ್ದು, ಬೆಳಗ್ಗೆ ಮಹಾರಾಷ್ಟ್ರದ ಮುಂಬೈನಲ್ಲಿ ಹಾಗೂ ಮಧ್ಯಾಹ್ನ ಪಶ್ಚಿಮ ಬಂಗಾಳದಲ್ಲಿ ಒಟ್ಟು ಮೂವರು ಕೊರೊನಾಗೆ ಬಲಿಯಾಗಿದ್ದಾರೆ.
ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಗೆ ಇಲ್ಲಿವರೆಗೆ 15,306 ಮಂದಿ ಬಲಿಯಾಗಿದ್ದು, 3.50 ಲಕ್ಷ ಜನರು ಸೋಂಕಿತರಾಗಿದ್ದಾರೆ.
ಅಮೆರಿಕಾದಲ್ಲಿ ನಿನ್ನೆ ಒಂದೇ ದಿನ ಕೊರೋನಾ ವೈರಸ್ ಪ್ರಕರಣಕ್ಕೆ 100 ಮಂದಿ ಮೃತಪಟ್ಟಿದ್ದು, ಒಟ್ಟು 458 ಮಂದಿ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 34 ಸಾವಿರ ದಾಟಿದೆ.
ಚೀನಾ ಇಟಲಿ ಬಳಿಕ ಹೆಚ್ಚಿನ ಸಂಖ್ಯೆ ವೈರಸ್ ಬಾಧಿತರು ಇರೋದು ಅಮೆರಿಕಾದಲ್ಲಿ ಎಂದು ವರದಿಯಾಗಿದ್ದು, ಇಟಲಿಯಲ್ಲಿ ಮೃತರ ಸಂಖ್ಯೆ 5500ಕ್ಕೆ ಏರಿಕೆಯಾಗಿದೆ, ಸ್ಪೇನ್ನಲ್ಲಿ 2182, ಇರಾನ್ ನಲ್ಲಿ 1812, ಫ್ರಾನ್ಸ್ 674, ಬ್ರಿಟನ್ 281, ನೆದರ್ ಲೆಂಡ್ ನಲ್ಲಿ 179, ಜರ್ಮನಿಯಲ್ಲಿ 111 ಮಂದಿ ಬಲಿಯಾಗಿದ್ದಾರೆ.












