ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ: ರಾಜ್ಯದಲ್ಲೂ ಆತಂಕ ಶುರು.!

ಬೆಂಗಳೂರು: ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಇದರಿಂದ ರಾಜ್ಯದಲ್ಲೂ ಆತಂಕ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.2ಕ್ಕಿಂತಲೂ ಕಡಿಮೆಯಿದೆ. ಆದರೆ, ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಶೇ.4 ಮತ್ತು ಶೇ.10ರಷ್ಟಿದೆ. ಆ ರಾಜ್ಯಗಳಿಂದ ಕರ್ನಾಟಕ ಹಾಗೂ ಬೆಂಗಳೂರಿಗೆ ಸಾಕಷ್ಟು ಜನರು ಪ್ರಯಾಣ ಮಾಡುತ್ತಿದ್ದು, ಇದು ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.