ಎ. 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ: ಕೇಂದ್ರ ಸರ್ಕಾರ

ನವದೆಹಲಿ: ಕೊರೊನಾ ಲಸಿಕೆ ಅಭಿಯಾನವನ್ನು ಮತ್ತಷ್ಟು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಅದರಂತೆ ಎಪ್ರಿಲ್ 1ರಿಂದ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲು ತೀರ್ಮಾನಿಸಿದೆ.

ಇಂದು ಈ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಾಹಿತಿ ನೀಡಿದರು. ಎ.1 ರಿಂದ 45 ವಯಸ್ಸಿನ ಮೇಲ್ಪಟ್ಟವರೂ ಸಹ ಕೊರೊನಾ ಲಸಿಕೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಕೆಲವು ಆರೋಗ್ಯ ಸಮಸ್ಯೆ (co-morbidities) ಇಲ್ಲದವರೂ ಸಹ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.