ಉಡುಪಿ: ಅ.21 ರಂದು ಶಾಲಾ ಶಿಕ್ಷಕರ ನೇಮಕಾತಿಗಾಗಿ ಕೌನ್ಸಲಿಂಗ್

ಉಡುಪಿ: ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ -2022 ರ ನೇಮಕಾತಿಗೆ ಸಂಬಂಧಿಸಿದಂತೆ 2023 ರ ಮಾರ್ಚ್ 8 ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ https:schooleducation.karnataka.gov.in ನಲ್ಲಿ ಪ್ರಕಟಿಸಲಾಗಿರುತ್ತದೆ.

ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅಕ್ಟೋಬರ್ 21 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಸರಕಾರಿ ಬಾಲಕಿಯರ ಪ.ಪೂರ್ವ ಕಾಲೇಜು (ಪ್ರೌಢ ವಿಭಾಗ) ಇಲ್ಲಿನ ಸವ್ಯಸಾಚಿ ಸಭಾಭವನದಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಪಟ್ಟ ಅಗತ್ಯ ದಾಖಲೆ ಹಾಗೂ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2574878 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.