ಮಂಗಳೂರು: ಆರ್ಥಿಕ ಮುಗ್ಗಟ್ಟಿನಿಂದಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕದ್ರಿ ಬುಧವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ತಬಲ ಕಲಾವಿದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಎಂದು ಗುರುತಿಸಲಾಗಿದೆ. ಸುರೇಶ್ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದು, ಅವರ ಪತ್ನಿ ವಾಣಿ ನೇಣಿಗೆ ಶರಣಾಗಿದ್ದಾರೆ. ಮೃತ ದಂಪತಿ ಓರ್ವ ಪುತ್ರನನ್ನು ಅಗಲಿದ್ದಾರೆ.
ಸುರೇಶ್ ಖ್ಯಾತ ತಬಲ ಕಲಾವಿದರಾಗಿದ್ದರು. ಅವರ ಪತ್ನಿ ವಾಣಿ ಖಾಸಗಿ ಕಾಲೇಜುವೊಂದರಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು. ಹಣಕಾಸು ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.