udupixpress
Home Trending ಜಾಮೀನು ಅರ್ಜಿ ವಜಾ: ರಿಯಾ ಚಕ್ರವರ್ತಿಗೆ ಜೈಲೇ ಗತಿ

ಜಾಮೀನು ಅರ್ಜಿ ವಜಾ: ರಿಯಾ ಚಕ್ರವರ್ತಿಗೆ ಜೈಲೇ ಗತಿ

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಬಂಧನಕ್ಕೆ ಒಳಗಾಗಿರುವ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಇಂದು ವಜಾಗೊಳಿಸಿದೆ.

ಮಂಗಳವಾರ ಬಂಧನಗೊಂಡ ರಿಯಾ ಅವರಿಗೆ ನ್ಯಾಯಾಲಯ ಸೆ. 22ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ರಿಯಾ ಚಕ್ರವರ್ತಿ ಪರ ವಕೀಲರು ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಎನ್‌ಸಿಬಿಯಿಂದ ಬಂಧಿತರಾಗಿರುವ ರಿಯಾ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಯ ವಿಚಾರಣೆಯು ಕೂಡ ಇದೇ ನ್ಯಾಯಾಲಯದಲ್ಲಿ ನಡೆಯಿತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಇಬ್ಬರು ಕೂಡ ಇನ್ನಷ್ಟು ದಿನ ಜೈಲಿನಲ್ಲಿಯೇ ದಿನ ಕಳೆಯುವಂತಾಗಿದೆ.

ಜಾಮೀನಿಗಾಗಿ ಹೈಕೋರ್ಟ್ ಮೊರೆ
ಈ ನಡುವೆ ರಿಯಾ ಚಕ್ರವರ್ತಿ ವಕೀಲರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

error: Content is protected !!