ಜ. 4 ರಂದು ಕೋವಾಕ್ಸಿನ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಮೇಳ

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.

ಕೋವಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವಾಕ್ಸಿನ್ ಮುನ್ನೆಚ್ಚರಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೀಕರಣವನ್ನು ಖಚಿತಪಡಿಸಿಕೊಂಡು ಲಸಿಕೆ ಪಡೆಯುವಂತೆ ಹಾಗೂ ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲವೆಂದೂ, ಲಸಿಕೆ ಬಂದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.