ಉಡುಪಿ ಜಿಲ್ಲೆಯಲ್ಲಿ ಜ.1ರಿಂದ ಇಂದಿನವರೆಗೆ ಒಟ್ಟು 1293 ಮಂದಿ ಮಕ್ಕಳು ಹಾಗೂ ವಿದ್ಯಾರ್ಥಿಗಳಲ್ಲಿ ಕೊರೊನ ಸೋಂಕು ಕಾಣಿಸಿಕೊಂಡಿದೆ. ಕಳೆದ 13 ದಿನಗಳಲ್ಲಿ 5 ವರ್ಷದೊಳಗಿನ ಒಟ್ಟು 20 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಮಾಹಿತಿ ನೀಡಿದ್ದಾರೆ.
ಉಳಿದಂತೆ 5 ರಿಂದ 10 ವರ್ಷದೊಳಗಿನ 72, 10 ರಿಂದ 15ವರ್ಷದೊಳಗಿನ 256, 15ರಿಂದ 20 ವರ್ಷದೊಳಗಿನ 473 ಹಾಗೂ 21 ರಿಂದ 25 ವರ್ಷದೊಳಗಿನ 472 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ವೈದ್ಯಕೀಯ, ಇಂಜಿನಿಯರಿಂಗ್, ನರ್ಸಿಂಗ್, ಫಾರ್ಮಸಿ ಸೇರಿದಂತೆ ವಿವಿಧ ಪದವಿ ತರಗತಿಗಳಲ್ಲಿ ಓದುತ್ತಿರುವವರು, ಪದವಿ ಪೂರ್ವ ಕಾಲೇಜು, ಹೈಸ್ಕೂಲ್ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಲಿಯುತ್ತಿರುವ ಪುಟಾಣಿ ಮಕ್ಕಳೂ ಸೇರಿದ್ದಾರೆ ಎಂದರು.