ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ: ಅವಧಿ ಮೀರಿ ತೆರೆಯುವ ಪಬ್, ಬಾರ್ ಗಳ ವಿರುದ್ಧ ಕ್ರಮಕೈಗೊಳ್ಳಿ- ಡಿಸಿ

ಉಡುಪಿ: ಮಣಿಪಾಲ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಅವಧಿ ಮೀರಿ ಪಬ್ ಮತ್ತು ಬಾರ್ ಗಳು ತೆರೆದಿದ್ದು, ಇದರಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ. ಇಂತಹ ಪಬ್ ಬಾರ್ ಗಳ ವಿರುದ್ಧ ಅಬಕಾರಿ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳುವಂತೆ ಜಿ. ಜಗದೀಶ್ ಸೂಚನೆ ನೀಡಿದರು.

ಬುಧವಾರ ನಡೆದ ಕೋವಿಡ್ 2ನೇ ಅಲೆ ಹರಡುವಿಕೆಯನ್ನು ನಿಯಂತ್ರಿಸುವ ಕುರಿತ ಸಭೆಯಲ್ಲಿ ಮಾತನಾಡಿದರು. ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.