ಉಡುಪಿ: ಅಸಂಘಟಿತ ಕಾರ್ಮಿಕರಿಗೆ ಪರಿಹಾರ : ಪರಿಷ್ಕೃತ ಮಾರ್ಗಸೂಚಿ

ಉಡುಪಿ: ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿಕಾರ್ಮಿಕರು ಸೇರಿದಂತೆ ಒಟ್ಟು 11 ವಲಯದ ಅಸಂಘಟಿತ ಕಾರ್ಮಿಕರಿಗೆ ತಲಾ 2,000 ರೂ. ಗಳ ಪರಿಹಾರ ಧನ ನೀಡುವ ಕುರಿತು ಮಾರ್ಗಸೂಚಿಯಲ್ಲಿ ಮಾರ್ಪಾಡುಗಳನ್ನು ಸೇರಿಸಲಾಗಿದ್ದು, ಮೊಬೈಲ್ ಸಂಖ್ಯೆ ನಮೂದಿಸುವುದು ಐಚ್ಛಿಕವಾಗಿದ್ದು, ಉದ್ಯೋಗ ಪ್ರಮಾಣ ಪತ್ರವನ್ನು ಮಾರ್ಗಸೂಚಿಯಲ್ಲಿ ನಮೂದಿಸಿರುವ ಯಾವುದಾದರೂ ಅಧಿಕಾರಿ ಅಥವಾ ಕೆಲಸ ನಿರ್ವಹಿಸುತ್ತಿರುವ ಮಾಲೀಕರಿಂದ ನಿಗದಿತ ನಮೂನೆಯಲ್ಲಿ ಪಡೆದು ಸಲ್ಲಿಸಬಹುದಾಗಿದೆ.

ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಕಾರ್ಮಿಕ ಇಲಾಖೆಯಿಂದ ಪರಿಶೀಲಿಸಿ ಅನುಮೋದಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.