ಚಿಕ್ಕಬಳ್ಳಾಪುರ: ಕೋವಿಡ್ ಪಾಸಿಟಿವಿಟಿ ದರ ಶೇ 2ಕ್ಕಿಂತ ಹೆಚ್ಚುವ ಜಿಲ್ಲೆಗಳಲ್ಲಿ ತಕ್ಷಣವೇ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ಶಿಕ್ಷಣ, ವ್ಯಾಪಾರ ಸೇರಿ ಎಲ್ಲ ಚಟುವಟಿಕೆಗೆ ಅವಕಾಶ ಮಾಡಿ ಕೊಟ್ಟಿದ್ದೇವೆ. ಸೋಂಕು ಹೆಚ್ಚಿದರೆ ಆ ಜಿಲ್ಲೆಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಬೇಕಾಗುತ್ತದೆ. ಇದರಿಂದ ಸಂಭವನೀಯ ಕೋವಿಡ್ 3ನೇ ಅಲೆ ತಡೆಯಲು ಸಾಧ್ಯ. ಮೂರನೇ ಅಲೆ ತಡೆಗೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.