ಕೋವಿಡ್ ಪಾಸಿಟಿವಿಟಿ ದರ ಇಳಿಮುಖ: ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಇಳಿಮುಖವಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಸರಾಸರಿ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 0.73 ರಷ್ಟಿದ್ದು, ವೀಕೆಂಡ್ ಕರ್ಫ್ಯೂ ಹೇರಿಕೆ‌ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇದೆ. ಈ‌ ಹಿನ್ನೆಲೆ ವೀಕೆಂಡ್ ಕರ್ಫ್ಯೂವನ್ನು ರದ್ದು ಮಾಡಲಾಗಿದೆ.

ಒಂದು ವೇಳೆ ಸೋಂಕು ಹೆಚ್ಚಳ‌ ಆದ್ರೆ ವೀಕೆಂಡ್ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಗತ್ಯ ಬಿದ್ರೆ ಜಿಲ್ಲಾಧಿಕಾರಿಗಳು ವೀಕೆಂಡ್ ಕರ್ಫ್ಯೂ ಜಾರಿ ಮಾಡಬಹುದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.